ಭಾರಿ ಮಳೆ;  ಪ್ರವಾಹ ಸಂತ್ರಸ್ತರಿಗೆ ಭಾರೀ ದೇಣಿಗೆ ಘೋಷಿಸಿದ NTR

Junior NTR 1
Published on

 ಹೈದ್ರಾಬಾದ್​: ಕಳೆದ ಮೂರು ದಿನಗಳಿಂದ ತೆಲುಗು ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹ ಅವಾಂತರ ಸೃಷ್ಟಿಸಿರುವುದು ಗೊತ್ತೇ ಇದೆ. ಈ ಕ್ರಮದಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಬೆಂಬಲ ಚಟುವಟಿಕೆಗಳನ್ನು ಆರಂಭಿಸಿವೆ. ಸ್ವತಃ ಸಿಎಂ ಕಣಕ್ಕಿಳಿದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಎಪಿಯಲ್ಲಿ ಕಳೆದೆರಡು ದಿನಗಳಿಂದ ಸಿಎಂ ಚಂದ್ರಬಾಬು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ಜನರ ಸಮಸ್ಯೆಗಳನ್ನು ಅರಿಯಲು ಮುಂದಾಗಿದ್ದಾರೆ. ಮತ್ತೊಂದೆಡೆ, ತೆಲಂಗಾಣ ಸಿಎಂ ರೇವಂತ್ ಕೂಡ ಖಮ್ಮಂನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬುತ್ತಿದ್ದಾರೆ. ಈ ಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮದೇ ಆದ ರೀತಿಯಲ್ಲಿ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ.

ಜೂನಿಯರ್ ಎನ್ ಟಿಆರ್  ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳ ಸಹಾಯ ನಿಧಿಗೆ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಎನ್​ಟಿಆರ್​​ ಎಕ್ಸ್ ನಲ್ಲಿ ಈ ದೇಣಿಗೆಯನ್ನು  ಘೋಷಿಸಿದ್ದಾರೆ.

“ಭಾರೀ ಮಳೆಯಿಂದಾಗಿ ಎರಡು ತೆಲುಗು ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ನಾನು ಆಳವಾಗಿ ಮನನೊಂದಿದ್ದೇನೆ. ಈ ದುರಂತದಿಂದ ತೆಲುಗು ಜನರು ಬೇಗ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.   ತೆಲುಗು ರಾಜ್ಯಗಳ ಸರ್ಕಾರಗಳು ಪ್ರವಾಹ ವಿಕೋಪದಿಂದ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳಿಗೆ ಸಹಾಯ ಮಾಡಲು, ನನ್ನ ಕಡೆಯಿಂದ ನಾನು ರೂ. 50 ಲಕ್ಷ ದೇಣಿಗೆ  ನೀಡುತ್ತೇನೆ,'' ಎಂದು  ಟ್ವೀಟ್ ಮಾಡಿದ್ದಾರೆ.

ಎನ್ ಟಿಆರ್ ಮಂಗಳೂರಿಗೆ ಹೋಗಿ ಅಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡಿದ್ದು ಗೊತ್ತೇ ಇದೆ. ಎನ್ ಟಿಆರ್ ಜೊತೆಗೆ ನಟ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಇದ್ದರು. ಎರಡು ದಿನಗಳ ಕಾಲ ಅವರೊಂದಿಗೆ ದೇವರ ದರ್ಶನ ಪಡೆದರು. ಇತ್ತೀಚೆಗಷ್ಟೇ ಹೈದರಾಬಾದ್ ತಲುಪಿದ್ದ  ಎನ್​ಟಿಆರ್​ ಈ ಸಂದರ್ಭದಲ್ಲಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net