16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ

dk - 2025-01-09T194521.872
Published on

ಬೆಂಗಳೂರು: ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್. ಜಿ ‌16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ ಖಾತೆಯಲ್ಲಿ ನಟನಿಗೆ ಅಭಿನಂದನೆ ಸಲ್ಲಿಸುವ ಮೂಲಕ ನೇಮಕ ಬಗ್ಗೆ ಉಲ್ಲೇಖಿಸಿದ್ದಾರೆ.

ತಮ್ಮ ಎಕ್ಸ್​ಖಾತೆಯಲ್ಲಿ ಹಂಚಿಕೊಂಡಿರುವ ಸಿಎಂ, ‘’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ಅವರಿಗೆ ಅಭಿನಂದನೆಗಳು’’

"ಸರ್ವ ಜನಾಂಗದ ಶಾಂತಿಯ ತೋಟ" ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕನ್ನಡ ಮತ್ತು ಹಿಂದಿ ಭಾಷೆಯ ಸಿನಿಮಾಗಳು ಸೇರಿದಂತೆ ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸಿವ ಮೂಲಕ ನಟ ಕಿಶೋರ್ ತಮ್ಮ ಖ್ಯಾತಿಯನ್ನು ಹೆಚ್ಚಿಕೊಂಡಿದ್ದಾರೆ. ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಪ್ರಚಾರ ತಂದುಕೊಡುವ ಉದ್ದೇಶದಿಂದ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ ಎಂದು ಅದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದೆ. ಇದೇ 2025ರ ಮಾರ್ಚ್​ 1ರಿಂದ 8ರವರೆಗೆ 8 ದಿನಗಳ ಕಾಲ ನಡೆಯುವ ಈ ಸಿನಿಮೋತ್ಸವದಲ್ಲಿ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುತ್ತಮ ಸಿನಿಮಾಗಳ ಪ್ರದರ್ಶನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net