ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

mohanlal
Published on

 ಚೆನ್ನೈ: ಮಲಯಾಳಿ ಹೀರೋ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಕೊಚ್ಚಿಯ ಅಮೃತಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋಹನ್​ ಲಾಲ್ ಅವರ ಆರೋಗ್ಯ ಸ್ಥಿತಿ ಸುಧಾರಿಸುವುದಲ್ಲದೆ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ 5 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕೆಲವು ದಿನಗಳ ಕಾಲ ಜನನಿಬಿಡ ಸ್ಥಳಗಳು ಮತ್ತು ಶೂಟಿಂಗ್‌ಗಳಿಂದ ದೂರವಿರಿ ಎಂದು ವೈದ್ಯಕೀಯ ಬುಲೆಟಿನ್ ಹೇಳುತ್ತದೆ. ಸದ್ಯ ಮೋಹನ್ ಲಾಲ್ ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಮೋಹನ್ ಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುದ್ದಿ ಬಂದಾಗ ಅಭಿಮಾನಿಗಳು ಆತಂಕಗೊಂಡಿದ್ದರು. ತಮ್ಮ ನೆಚ್ಚಿನ ನಾಯಕ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net