ಶೂಟಿಂಗ್ ವೇಳೆ ಅವಘಡ... ಶಸ್ತ್ರ ಚಿಕಿತ್ಸೆಗಾಗಿ ಹೈದ್ರಾಬಾದ್​​ಗೆ ತೆರಳಿದ ಬಹುಭಾಷಾ ನಟ

prk pic
Published on

ಸಿನಿಮಾ ಶೂಟಿಂಗ್ ವೇಳೆ ಬಹುಭಾಷಾ ನಟ ಪ್ರಕಾಶ್​ ರಾಜ್​​ ಅವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ತೆರಳುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ದಕ್ಷಿಣ ಭಾರತದ ಬಹುಭಾಷಾ ನಟ ಎಂದೇ ಖ್ಯಾತರಾಗಿರುವ ಪ್ರಕಾಶ್ ರಾಜ್, ತಮಿಳು ಸೂಪರ್ ಸ್ಟಾರ್ ಧನುಷ್ ನಟನೆಯ 44ನೇ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶೂಟಿಂಗ್ ವೇಳೆ ಒಂದು ಸಣ್ಣ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ, ಡಾ. ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ನಾನು ಚೆನ್ನಾಗಿದ್ದೇನೆ, ಯಾರೂ ಚಿಂತೆ ಮಾಡಬೇಡಿ ಎಂದು ಟ್ವೀಟ್​ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net