ಪುನೀತ್ ಅಂತ್ಯಕ್ರಿಯೆಗೆ ಕುಟುಂಬ ಸದಸ್ಯರು, ಗಣ್ಯರಿಗೆ ಮಾತ್ರ ಅವಕಾಶ

Puneeth Funerals
Published on

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಕುಟುಂಬದವರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಕುಟುಂಬದ ಸದಸ್ಯರು ಹಾಗೂ ಕೆಲವು ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಂಠೀರವ ಕ್ರೀಡಾಂಗಣದಿಂದ ಪಾರ್ಥಿವ ಶರೀರದ ಮೆರವಣಿಗೆ ನಾಳೆ ಬೆಳಿಗ್ಗೆ 5.30 ರಿಂದ 6.30 ವೇಳೆಗೆ ಹೊರಟು ಕಂಠೀರವ ಸ್ಟುಡಿಯೋಕ್ಕೆ ತಲುಪಲಿದೆ. ಸ್ಟುಡಿಯೋದೊಳಗೆ ಸ್ಥಳಾವಕಾಶ ಕಡಿಮೆ ಇರುವುದರಿಂದ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಹಾಲು ತುಪ್ಪ ಕಾರ್ಯ ನೆರವೇರಿದ ಮೇಲೆ ಸೂಕ್ತ ವ್ಯವಸ್ಥೆಗಳನ್ನು ಹಾಗೂ ಸುರಕ್ಷತೆ ಕಲ್ಪಿಸಿದ ನಂತರ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಆಸ್ಪತ್ರೆ ಹಾಗೂ ಕ್ರೀಡಾಂಗಣದಲ್ಲಿ ಪುನೀತ್ ಅವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸುವ ವೇಳೆ ನಾಡಿನ ಮಹಾಜನತೆ ಹಾಗೂ ಪುನೀತ್ ಅವರ ಅಭಿಮಾನಿಗಳು ಸಂಯಮ, ಶಾಂತಿ ಮತ್ತು ಶಿಸ್ತಿನಿಂದ ನಡೆದುಕೊಂಡಿದ್ದಕ್ಕಾಗಿ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net