ನಟ-ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್ ಆಸ್ಪತ್ರೆಗೆ ದಾಖಲು

RR
Published on

ಬೆಂಗಳೂರು: ನಟ-ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್ ಅವರು ಅನಾರೋಗ್ಯಕ್ಕೀಡಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿರುವ ಅವರು ಚಿಕಿತ್ಸೆಯಲ್ಲಿದ್ದಾರೆ.

ಇಂದು ಸಂಜೆ 6 ಗಂಟೆಯ ಸುಮಾರಿಗೆ ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿರುವ ರಾಘವೇಂದ್ರ ರಾಜ್​ಕುಮಾರ್ ಬಳಿಕ, ಅಲ್ಲಿಯೇ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಈಗ ಆರಾಮವಾಗಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ನಟ ಧ್ರುವ ಸರ್ಜಾ, ನಿರ್ದೇಶಕ ನಂದಕಿಶೋರ್ ಅವರು ಕೂಡ ಆಸ್ಪತ್ರೆಗೆ ಬಂದು ಯೋಗಕ್ಷೇಮ ವಿಚಾರಿಸಿದ್ದಾರೆ.

ಅಪ್ಪಾಜಿ ಅವರಿಗೆ ಶೂಟಿಂಗ್ ವೇಳೆ ಸ್ವಲ್ಪ ಸುಸ್ತಾಗಿತ್ತು. ಹೀಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ. ಜತೆಗೆ ಜನರಲ್ ಚೆಕಪ್​ ಇದ್ದ ಕಾರಣ ಅವರು ಅಡ್ಮಿಟ್​ ಆಗಿದ್ದಾರೆ. ಸದ್ಯ ಆರಾಮಾಗಿದ್ದಾರೆ, ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ನಾಳೆ ಡಿಸ್​ಚಾರ್ಜ್​ ಆಗುತ್ತಾರೆ. | ವಿನಯ್ ರಾಜ್​ಕುಮಾರ್​ ರಾಘವೇಂದ್ರ ರಾಜ್​ಕುಮಾರ್ ಪುತ್ರ.

ಆಸ್ಪತ್ರೆಗೆ ಸಹೋದರ ಪುನೀತ್ ರಾಜ್​ಕುಮಾರ್ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಮತ್ತೊಂದೆಡೆ ಕುಟುಂಬ ಸದಸ್ಯರು ಹಾಗೂ ಶಿವರಾಜ್​ಕುಮಾರ್ ಆಸ್ಪತ್ರೆಯಲ್ಲಿದ್ದಾರೆ. 'ಬೆಳಕು' ಸಿನಿಮಾ ಶೂಟಿಂಗ್​ನಲ್ಲಿದ್ದ ಅವರಿಗೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಕಾಣಿಸಿದ್ದರಿಂದ ದಾಖಲಿಸಲಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ. ನಾಳೆ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಲಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net