

ನವದೆಹಲಿ: ಲೋಕಸಭೆ ಚುನಾವಣೆಯ ನಡುವೆ ಬಾಲಿವುಡ್ ನಟ ಶೇಖರ್ ಸುಮನ್ ಹಾಗೂ ಕಾಂಗ್ರೆಸ್‌ನ ಮಾಜಿ ನಾಯಕಿ ರಾಧಿಕಾ ಖೇರಾ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಮನ್ವಯಾಧಿಕಾರಿಯಾದ ಖೇರಾ ಪಕ್ಷದ ಛತ್ತೀಸ್‌ಗಢದ ಕಚೇರಿಯಲ್ಲಿ ಮತ್ತೊಬ್ಬ ನಾಯಕನೊಂದಿಗೆ ವಾಗ್ವಾದ ನಡೆಸಿದ ಮಾರನೇ ದಿನ ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ರಾಮ ಮಂದಿರಕ್ಕೆ ಭೇಟಿ ನೀಡಿ ಚಿತ್ರಗಳನ್ನು ಶೇರ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.
‘ರಾಮನ ಭಕ್ತೆ ಎಂಬ ಕಾರಣಕ್ಕೆ,ರಾಮಲಲ್ಲಾನ ದರ್ಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ, ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಮೋದಿ ಸರ್ಕಾರವು ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ ಅಲ್ಲ, ಅದು ರಾಮ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್, ”ಎಂದು ಅವರು ಬಿಜೆಪಿಗೆ ಸೇರಿದ ನಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2012 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಶೇಖರ್ ಸುಮನ್ ರಾಜಕೀಯದಲ್ಲಿ ಇದು ಎರಡನೇ ಅವಧಿಯಾಗಿದೆ. ನಟ 2009 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ವಿರುದ್ಧ ಸ್ಪರ್ಧಿಸಿದ್ದರು.