ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಬಿಟ್ಟು ದ್ವಾರಕೀಶ್ ಅಂತಿಮ ದರ್ಶನಕ್ಕೆ ಚೆನ್ನೈನಿಂದ ಬಂದ ನಟ ಸುದೀಪ್

kichcha sudeep
Published on

ಬೆಂಗಳೂರು: ಮ್ಯಾಕ್ಸ್ ಸಿನಿಮಾದ ಶೂಟಿಂಗ್​ಗಾಗಿ ಚೆನ್ನೈನಲ್ಲಿದ್ದ ಸುದೀಪ್ ಇಂದು ಶೂಟಿಂಗ್ ಬ್ರೇಕ್ ಪಡೆದುಕೊಂಡು ಬಂದು ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ದ್ವಾರಕೀಶ್ ಬ್ಯಾನರ್​ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು.

ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು. ಅವರ ಕುಟುಂಬಕ್ಕೆ ತೀವ್ರವಾದ ಸಂತಾಪಗಳು. ಹಿರಿಯ ಚೇತನದ ಆತ್ಮಕ್ಕೆ ಶಾಂತಿ ಕೋರುವುದಾಗಿ ನಟ ಸುದೀಪ್​ ತಮ್ಮ ಎಕ್ಸ್​ ಹ್ಯಾಂಡಲ್​ನಲ್ಲಿ ಬರೆದಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಸದ್ಯ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ ರುದ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ.

https://www.vijayavani.net/dwarakish-and-vishnuvardhan-friendship-reason-behind-break

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net