

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಲ್ಮಾನ್ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಶುಭಾಶಯ ತಿಳಿಸಿ ಸೋಶಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದಾರೆ.
ನನ್ನ ಪ್ರೀತಿಯ ಸರ್ ಮತ್ತು ಸಹೋದರ ಸಲ್ಮಾನ್ ನಿಮಗೆ ನನ್ನ ಶುಭಾಶಯಗಳು. ನಿಮ್ಮೊಂದಿಗೆ ಕಳೆದ ಕ್ಷಣಗಳು ಯಾವತ್ತಿಗೂ ಹಸಿರಾಗಿರುತ್ತವೆ. ನಿಮ್ಮಂತಹ ಅದ್ಭುತ ವ್ಯಕ್ತಿತ್ವದ ವ್ಯಕ್ತಿ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.
ಸಲ್ಮಾನ್ ಖಾನ್ ಮತ್ತು ಸುದೀಪ್ ಈಗಾಗಲೇ ಒಟ್ಟಿಗೆ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ತೆರೆಮರೆಯಲ್ಲಿ ಕೂಡ ಒಳ್ಳೆಯ ಬಾಂಧವ್ಯವಿದೆ. ಈ ಸ್ನೇಹಕ್ಕೆ ಸಾಕ್ಷಿಯಾಗಿ ಕಿಚ್ಚನ ಸಿನಿಮಾಗೆ ಸಲ್ಲು ಸಾಥ್ ನೀಡಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ನೋಡುವುದು ಪಕ್ಕಾ ಎನ್ನಲಾಗುತ್ತಿದೆ.
ಕೆಲ ತಿಂಗಳ ಹಿಂದೆಯಷ್ಟೇ ಕಿಚ್ಚ ಸುದೀಪ್ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಬಗ್ಗೆ ಬ್ರೇಕಿಂಗ್ ಅಪ್‌ಡೇಟ್‌ವೊಂದನ್ನ ನೀಡಿದ್ದರು. ಬ್ಯಾಡ್ ಬ್ಯಾಯ್ ಸಲ್ಮಾನ್ ಖಾನ್ ಗಾಗಿ ಚಿತ್ರವೊಂದನ್ನು ನಿರ್ದೇಶನ ಮಾಡುವುದಾಗಿ ಹೇಳಿದ್ದರು. ಸಲ್ಲುಗಾಗಿಯೇ ಕಿಚ್ಚ ಭಿನ್ನ ಕಥೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಸಲ್ಮಾನ್ ಖಾನ್‌ಗೆ ಕಥೆ ಹೇಳಿ, ಸಿನಿಮಾ ಮಾಡುವುದಾಗಿ ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ.
ದಬಾಂಗ್ 3 ಸಿನಿಮಾದಲ್ಲಿ ಸಲ್ಮಾನ್ ಖಾನ್ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದರು. ಕಿಚ್ಚ ಅವರು ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ 'ಫೂಂಕ್', ರಣ್, 'ಫೂಂಕ್ 2' ಚಿತ್ರಗಳಲ್ಲಿ ಸುದೀಪ್ ನಟಿಸಿದ್ದಾರೆ. ಆದರೆ, ಬಾಲಿವಡ್ ಸ್ಟಾರ್ ನಟ ಸಲ್ಮಾನ್ ಖಾನ್ ಎದುರು ಸುದೀಪ್ ನಟಿಸುತ್ತಿರುವುದು ಇದು ಮೊದಲು.