ಮೈಸೂರಿನಲ್ಲಿ ನಟ ವಿಷ್ಣುವರ್ಧನ್ ಪುಣ್ಯಸ್ಮರಣೆ

Published on

ಮೈಸೂರು: ವಿಷ್ಣು ಒಕ್ಕೂಟ ಅಭಿಮಾನಿಗಳ ಸಂಘದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯ ಸಾಹಸಸಿಂಹ ವಿಷ್ಣುವರ್ಧನ್ ಉದ್ಯಾನದಲ್ಲಿ ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಪ್ರಯುಕ್ತ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮತ್ತು ವಿಷ್ಣು ಗ್ರೂಪ್ ವಾದ್ಯಗೋಷ್ಠಿ ತಂಡದಿಂದ ವಿಷ್ಣುವರ್ಧನ್ ನಟಿಸಿರುವ ಚಿತ್ರದ ಹಾಡುಗಳ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಎಂ.ಡಿ.ಪಾರ್ಥಸಾರಥಿ, ಕೆ.ಆರ್. ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net