

ಚೆನ್ನೈ: ಹಾಸ್ಯನಟ ಯೋಗಿ ಬಾಬು ಕಾಲಿವುಡ್ನಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದ್ದಾರೆ. ತಮ್ಮ ವಿಭಿನ್ನ ಮ್ಯಾನರಿಸಂನಿಂದಲೇ ಎಲ್ಲರ ಗಮನ ಸೆಳೆಯುವ ಯೋಗಿ ಬಾಬು ಸದ್ಯ ಕಾಲಿವುಡ್ನಲ್ಲಿ ಬಹು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಎಲ್ಲ ಸೂಪರ್ಸ್ಟಾರ್ಗಳೊಂದಿಗೂ ನಟಿಸಿ ಸೈ ಎನಿಸಿಕೊಂಡಿರುವ ಯೋಗಿ ಬಾಬು, ರಜನಿಕಾಂತ್ ಜತೆ ಜೈಲರ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 10ರಂದು ಬಿಡುಗಡೆಯಾಗಲಿದೆ.
ಇದೀಗ ಯೋಗಿ ಬಾಬುಗೆ ಸಂಬಂಧಿಸಿದ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ. ಯೋಗಿ ಬಾಬು ಅವರು ಮುರುಗನ್ ದೇವರ ದೊಡ್ಡ ಭಕ್ತ. ಆಗಾಗ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಕಳೆದ ತಿಂಗಳು ತಿರುವಳ್ಳೂರ್ ಜಿಲ್ಲೆಯಲ್ಲಿರುವ ಸಿರುವಪುರಿ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ವೈರಲ್ ಆಗಿರುವ ಇದಕ್ಕೆ ಸಂಬಂಧಿಸಿದ್ದಾಗಿದೆ.
ಪಂಚೆ ಮತ್ತು ಶರ್ಟ್ ಧರಿಸಿ, ಹೂವು ಮತ್ತು ನಿಂಬೆಹಣ್ಣಿನ ಹಾರ ಹಾಕಿಕೊಂಡಿರುವ ಯೋಗಿ ಬಾಬು ಮೊದಲು ಅಭಿಮಾನಿಯೊಬ್ಬರ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಇದಾದ ಬಳಿಕ ತಮ್ಮ ಎದುರಿಗೆ ಇರುವ ಪೂಜಾರಿಯೊಬ್ಬರ ಬಳಿ ತೆರಳಿ ಶೇಕ್ ಹ್ಯಾಂಡ್ ಮಾಡಲು ಕೈ ಮುಂದೆ ಚಾಚುತ್ತಾರೆ. ಆದರೆ, ಪೂಜಾರಿ ಶೇಕ್ ಹ್ಯಾಂಡ್ ಮಾಡದೇ ಅಲ್ಲಿಯೇ ನಿಂತು ಮಾಡಿಸಿ ಕಳುಹಿಸುತ್ತಾರೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಪೂಜಾರಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ಅಸ್ಪೃಶ್ಯತೆ ಜೀವಂತವಾಗಿದೆ ಎಂದು ಕಿಡಿಕಾರಿದ್ದಾರೆ. ಆದರೆ, ಇನ್ನು ಕೆಲವರು ಹ್ಯಾಂಡ್ಶೇಕ್ ನಮ್ಮ ಸಂಸ್ಕೃತಿಯ ಭಾಗವಲ್ಲ ಎಂದು ಕಾಮೆಂಟ್ ಮಾಡುವ ಮೂಲಕ ಪೂಜಾರಿ ಪರ ಬ್ಯಾಟ್ ಬೀಸಿದ್ದಾರೆ. (ಏಜೆನ್ಸೀಸ್)