

ಮುಂಬೈ: ನಟಿ ಗೆಹನಾ ವಸಿಷ್ಠ್ ಅವರು ಬಹುಕಾಲದ ಗೆಳೆಯ ಫೈಜನ್ ಅನ್ಸಾರಿ ಅವರ ಜತೆಗೆ ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ನಟಿ ಮದುವೆ ಜತೆಗೆ ಮತಾಂತರಗೊಂಡಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಗೆಹನಾ ವಸಿಷ್ಠ್ ಅವರ ಮೂಲ ಹೆಸರು ವಂದನಾ ತಿವಾರಿ. ಮೂಲತಃ ಅವರು ಚತ್ತೀಸ್ಗಡದವರು. ನಟಿ ಗೆಹನಾ ಅವರದ್ದು ಅಂತರ್ಧರ್ಮೀಯ ವಿವಾಹ. ಪ್ರಿಯಕರ ಫೈಜನ್ ಅನ್ಸಾರಿ ಜೊತೆ ಮದುವೆ ಆಗಿದ್ದಾರೆ. ಅಲ್ಲದೇ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ. ಮುಸ್ಲಿಂ ಸಂಪ್ರದಾಯದ ರೀತಿಯಲ್ಲೇ ಮದುವೆ ನಡೆದಿದೆ. ನಿಖಾ ಸಮಾರಂಭದ ಫೋಟೋಗಳು ಕೂಡ ವೈರಲ್ ಆಗಿವೆ. ಗೆಹನಾ ವಸಿಷ್ಠ್ ಮತ್ತು ಫೈಜನ್ ಅನ್ಸಾರಿಯ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಫೈಜನ್ ಅನ್ಸಾರಿ ಮತ್ತು ಗೆಹನಾ ವಸಿಷ್ಠ್ ಅವರು ಬಹುಕಾಲದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮದುವೆಯ ಕಾರಣಕ್ಕಾಗಿ ಅವರು ಮತಾಂತರ ಆಗಿಲ್ಲ. ಇದು ಅವರ ಸ್ವಂತ ನಿರ್ಧಾರ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾ ಇನ್ಫ್ಲೂಯನ್ಸರ್ ಆಗಿ ಫೈಜನ್ ಅನ್ಸಾರಿ ಗುರುತಿಸಿಕೊಂಡಿದ್ದಾರೆ. ಕೆಲವು ರಿಯಾಲಿಟಿ ಶೋಗಳಲ್ಲೂ ಅವರು ಸ್ಪರ್ಧಿಸಿದ್ದಾರೆ.
ಗೆಹನಾ ವಸಿಷ್ಠ್ ಮಾಡೆಲ್ ಆಗಿ ಜನಪ್ರಿಯತೆ ಈಕೆ ಹಲವಾರು ಜಾಹೀರಾತು, ಹಿಂದಿ ಮತ್ತು ತೆಲುಗು ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ಐಟಂ ಡ್ಯಾನ್ಸರ್ ಆಗಿಯೂ ಕಾಣಿಸಿಕೊಂಡು ಖ್ಯಾತಿ ಪಡೆದಿದ್ದಾರೆ. ರಾಜ್ ಕುಂದ್ರಾ ಅವರ ಅಶ್ಲೀಲ ಸಿನಿಮಾ ನಿರ್ಮಾಣದ ಕೇಸ್ನಲ್ಲಿ ಗೆಹನಾ ಅರೆಸ್ಟ್ ಆಗಿದ್ದರು. ನಂತರ ಅವರು ಜಾಮೀನು ಪಡೆದು ಹೊರಬಂದರು.