ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು

hema
Published on

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಕೋರ್ಟ್‌ಗೆ ಹೇಮಾ ಅರ್ಜಿ ಸಲ್ಲಿಸಿದ್ದರು. ಹೇಮಾ ಪರ ವಕೀಲರು, ಹೇಮಾ ಅವರಿಂದ ಯಾವುದೇ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ವಾದಿಸಿದರು. ಈ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಟಿ ಹೇಮಾಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ರೇವ್ ಪಾರ್ಟಿಯಲ್ಲಿ ಮಾದಕವಸ್ತು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢವಾಗಿತ್ತು ಮತ್ತೊಂದೆಡೆ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ತಾನು ಹೈದರಾಬಾದ್‌ನಲ್ಲಿ ಇರುವಂತೆ ಬಿಂಬಿಸಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ಆರೋಪದ ಹಿನ್ನೆಲೆಯನ್ನು ಆಕೆಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದರು. ನಟಿಗೆ ಜಾಮೀನು ಸಿಕ್ಕರೂ ಬಿಡುಗಡೆಯಾಗಿಲ್ಲ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಗುರುವಾರ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net