ನಟಿ ಖುಷ್ಬೂ ಸುಂದರ್​ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

kushboo Sundar
Published on

ಚೆನ್ನೈ: ಬಹುಭಾಷಾ ನಟಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ  ಖುಷ್ಬೂ ಸುಂದರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ನಟಿ ಖುಷ್ಬೂ ಟೇಲ್​ ಬೋನ್​ ಚಿಕಿತ್ಸೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ಧಾರೆ.

ನನ್ನ ಕೋಕ್ಸಿಕ್ಸ್ ಮೂಳೆಯ ಚಿಕಿತ್ಸೆಗಾಗಿ ನಾನು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆದಷ್ಟು ಬೇಗ ಗುಣಮುಖಳಾಗುವ ವಿಶ್ವಾಸವಿದೆ ಎಂದು ಟ್ವೀಟ್​ ಮಾಡಿ ತಿಳಿಸಿದ್ದಾರೆ. ನಟಿಯ ಟ್ವೀಟ್​ ಹೊರಬಿದ್ದ ಬೆನ್ನಲ್ಲೇ ಅಭಿಮಾನಿಗಳು ಹಾಗೂ ನೆಟ್ಟಿಗರು ಶೀಘ್ರ ಗುಣಮುಖರಾಗಲೀ ಎಂದು ಆಶಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net