ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್

Malavika Avinash
Published on

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಹಾಗೂ ರಾಜಕಾರಣಿ ಮಾಳವಿಕಾ ಅವಿನಾಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯ ಬೆಡ್ ನಿಂದ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಳವಿಕಾ, ಮೈಗ್ರೇನ್ ಸಮಸ್ಯೆ ಇದೆ. ಚೇತರಿಸಿಕೊಳ್ಳುತ್ತಿದ್ದೇನೆ. ಅಲ್ಲದೇ, ಈ ರೀತಿ ಸಮಸ್ಯೆಯಾದಾಗ ನೆಗ್ಲೆಟ್ ಮಾಡಬೇಡಿ ಇದು ತುಂಬಾ ಅಪಾಯಕಾರಿಯಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ​ ಹಂಚಿಕೊಂಡಿದ್ದಾರೆ.

ಮೈಗ್ರೇನ್ ಸಮಸ್ಯೆಯನ್ನು ಹೇಳಿಕೊಂಡು ಆಸ್ಪತ್ರೆಯ ಬೆಡ್ ನಿಂದ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಳವಿಕಾ, ಚೇತರಿಸಿಕೊಳ್ಳುತ್ತಿರುವ ಕುರಿತು ಹಂಚಿಕೊಂಡಿದ್ದಾರೆ. ಮಾಳವಿಕಾ ಹಾಕಿರುವ ಫೋಟೋ ಅವರದ್ದಾ ಅನ್ನುವ ಅನುಮಾನ ಮೂಡಿಸುವಷ್ಟು ಮುಖ ಬದಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net