ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ವಿವಾದ; ಕೋರ್ಟ್ ವಿಚಾರಣೆ ಬಳಿಕ ನಟಿ Ramya ಹೇಳಿದ್ದಿಷ್ಟು

Ramya
Published on

ಬೆಂಗಳೂರು: ಸ್ಯಾಂಡಲ್​ವುಡ್​ ಕ್ವೀನ್​, ಮೋಹಕ ತಾರೆ ರಮ್ಯಾ (Ramya) ಸದ್ಯ ನಟನೆ ಹಾಗೂ ರಾಜಕೀಯದಿಂದ ದೂರು ಉಳಿದಿದ್ದು, ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇತ್ತೀಚಿಗೆ ಸಾರ್ವಜನಿಕವಾಗಿ ಅಷ್ಟಾಗಿ ಕಾಣಿಸಿಕೊಳ್ಳದ ನಟಿ ರಮ್ಯಾ (Ramya) ಇಂದು ಕೋರ್ಟ್​ ಆವರಣದಲ್ಲಿ ಪ್ರತ್ಯಕ್ಷವಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದರು.

ಕಳೆದ ಕೆಲವು ವರ್ಷಗಳಿಂದ ಸಿನಿಮಾಗಳಿಂದ ಅಂತರ ಕಾಯ್ದುಕೊಂಡಿರುವ ನಟಿ ರಮ್ಯಾ (Ramya) ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರದ ಪ್ರಮೋಷನಲ್ ವಿಡಿಯೋನಲ್ಲೂ ಕಾಣಿಸಿಕೊಂಡಿದ್ದರು. ಆದರೆ, ಆ ಚಿತ್ರದ ಟ್ರೈಲರ್​ನಲ್ಲಿ ತಮ್ಮ ಅನುಮತಿ ಇಲ್ಲದೇ ದೃಶ್ಯಗಳನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ (Ramya) ಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ನಡೆಯಿತು.

ವಿಚಾರಣೆ ಬಳಿಕ ಮಾತನಾಡಿದ ನಟಿ ರಮ್ಯಾ (Ramya), ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಕೆಲ ದಾಖಲೆಗಳನ್ನು ನೀಡಲು ಹೇಳಿತ್ತು. ಕೋರ್ಟ್​ ಕೇಳಿದ ಎಲ್ಲಾ ದಾಖಲೆಗಳನ್ನು ನೇರವಾಗಿ ಬಂದು ಕೊಟ್ಟಿದ್ಧೇನೆ. ಈ ಪ್ರಕರಣ ಕೋರ್ಟ್‌ನಲ್ಲಿರುವ ಕಾರಣಕ್ಕೆ ಹೆಚ್ಚೇನು ಮಾತನಾಡಲ್ಲ ಎಂದು ಹೇಳಿದ್ದಾರೆ. ಚಿತ್ರ ಮಾಡುವ ಬಗ್ಗೆ ಪ್ರತಿಕ್ರಿಯಿಸಿ, ಒಳ್ಳೆಯ ಕಥೆ ಸಿಕ್ಕರೆ ಆದಷ್ಟು ಬೇಗ ಬರುತ್ತೇನೆ. ರಾಜಕೀಯಕ್ಕೆ ಬರುವ ಆಲೋಚನೆ ಸದ್ಯಕ್ಕಿಲ್ಲ ಎಂದು ನಟಿ ರಮ್ಯಾ (Ramya) ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net