ಕೊನೆಗೂ ನನ್ನನ್ನು ಅರ್ಥ ಮಾಡಿಕೊಂಡಿದ್ದಾರೆಂದ ನಟಿ ಸಮಂತಾ

samantha
Published on

ಹೈದರಬಾದ್​​: ಸಿನಿಮಾಗಳಿಂದ ಬ್ರೇಕ್ ಪಡೆದುಕೊಂಡ ನಟಿ ಸಮಂತಾ ಮಯೋಸಿಟಿಸ್ ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದಾರೆ. ಸ್ಯಾಮ್ ಸೋಶಿಯಲ್ ಮೀಡಿಯಾದಲ್ಲಿಯೂ ಸಕ್ರಿಯರಾಗಿದ್ದಾರೆ ಮತ್ತು ಅವರು ಅಲ್ಲಿ ಕಳೆದ ಪ್ರತಿ ಕ್ಷಣವನ್ನು ಅಭಿಮಾನಿಗಳ ಜತೆಗೆ ಹಂಚಿಕೊಳ್ಳುತ್ತಾರೆ.

ಸ್ಯಾಮ್ ಇತ್ತೀಚೆಗೆ ನ್ಯೂಯಾರ್ಕ್​​ನ ಬೀದಿಗಳಲ್ಲಿ ಫೋಟೋಶೂಟ್ ಮಾಡಿಸಿಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಶೇರ್​​ ಮಾಡಿಕೊಂಡಿದ್ದಾರೆ. ಈ ರೀತಿಯ ಮುಂಜಾನೆಗಳು..ನನಗೆ ಖುಷಿ ಕೊಡುವ ಸ್ಥಳಗಳು ಎಂದು ಕ್ಯಾಪ್ಷನ್​​ ನೀಡಿ ಫೋಟೋ ಶೇರ್​​ ಮಾಡಿದ್ದಾರೆ. ಸದ್ಯ ಸ್ಯಾಮ್ ಶೇರ್ ಮಾಡಿರುವ ಚಿತ್ರಗಳು ವೈರಲ್ ಆಗುತ್ತಿವೆ.

ಸ್ಯಾಮ್ ಕೆಲವು ದಿನಗಳಿಂದ ಪ್ರೀತಿ ಮತ್ತು ಸಂಬಂಧದ ಬಗ್ಗೆ ಕೆಲವು ಉಲ್ಲೇಖಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮತ್ತೊಮ್ಮೆ ಇನ್‌ಸ್ಟಾ ಸ್ಟೋರಿಯಲ್ಲಿ ಆಸಕ್ತಿದಾಯಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜಂಬೋ ಕಪ್ ಕಾಫಿಯನ್ನು ಕೈಯಲ್ಲಿ ಹಿಡಿದು ನಗುತ್ತಾ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ಈ ಫೋಟೋವನ್ನು ಹಂಚಿಕೊಂಡ ಸ್ಯಾಮ್, " ಕೊನೆಗೂ ಯಾರೋ ನನ್ನನ್ನು ಅರ್ಥ ಮಾಡಿಕೊಂಡಿದ್ದಾರೆಂದ #jumbosizedcoffee" ಎಂದು ಬರೆದಿದ್ದಾರೆ.

ಸಮಂತಾ ಅಭಿನಯದ ಖುಷಿ ಚಿತ್ರ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. ಇದರಲ್ಲಿ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿದ್ದು, ನಿರ್ದೇಶಕ ಶಿವ ನಿರ್ವಾಣ ನಿರ್ದೇಶಿಸಿದ್ದಾರೆ. ಈಗಾಗಲೇ ಖುಷಿ ಚಿತ್ರದ ಹಾಡುಗಳು ಪ್ರೇಕ್ಷಕರ ಮನಸೂರೆಗೊಂಡಿವೆ. ಈ ಚಿತ್ರದಲ್ಲಿ ವಿಜಯ್ ಮತ್ತು ಸ್ಯಾಮ್ ಅವರ ಕೆಮಿಸ್ಟ್ರಿ ಪ್ರೇಕ್ಷಕರನ್ನು ಮೆಚ್ಚಿಸುತ್ತದೆ ಎಂದು ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ನಿಂದ ತೋರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net