

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಸಪ್ತಮಿ ಗೌಡ ಕಾಂತಾರ ಮೂಲಕ ಖ್ಯಾತಿ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯ ಆಗಿರುವ ನಟಿ ಕ್ಯೂಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ನಟಿ ಸೀರೆಯುಟ್ಟು ಕ್ಯೂಟ್ ಆಗಿ ಪೋಸ್ ಕೊಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ನಟಿ ಸಪ್ತಮಿ ಗೌಡ ಬ್ಲೌಸ್ ಹಾಕದೆ ಸೀರೆಯುಟ್ಟು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇದೇ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಕಾಂತಾರ ಬೆಡಗಿ ನಟಿ ಸಪ್ತಮಿ ಗೌಡ ಅವರನ್ನು ಈ ಲುಕ್ನಲ್ಲಿ ನೋಡಿದ ಅಭಿಮಾನಿಗಳು ಅತ್ಯಂತ ಸುಂದರವಾಗಿ ಕಾಣುತ್ತಿದ್ದೀರಿ, ಬ್ಯೂಟಿಫುಲ್ ಕ್ವೀನ್, ಕ್ಯೂಟ್ ಅಂತ ಕಾಮೆಂಟ್ಸ್ ಹಾಕಿದ್ದಾರೆ. ಸಪ್ತಮಿ ಗೌಡ ತಮ್ಮ ಅಧಿಕೃತ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಲ್ಲ. ಆದರೆ ಮೇಕಪ್ ಕಲಾವಿದೆ ಒಬ್ಬರು ಹಂಚಿಕೊಂಡ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು ನಟಿ ಸಪ್ತಮಿ ಗೌಡ. ಬಳಿಕ ಯುವ ಚಿತ್ರದಲ್ಲಿ ಯುವರಾಜಕುಮಾರ್ ಜೊತೆ ನಾಯಕಿಯಾಗಿ ನಟಿಸಿದ್ದರು. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿ ನಟಿಸಲು ತಯಾರಿ ನಡೆಸುತ್ತಿದ್ದಾರೆ.
ಅಭಿಷೇಕ್ ಅಂಬರೀಷ್ ಜೊತೆ ನಟಿ ಸಪ್ತಮಿ ಗೌಡ ಕಾಳಿ ಸಿನಿಮಾ ಮಾಡ್ತಿದ್ದಾರೆ. ಈ ಚಿತ್ರವನ್ನು ಎಸ್ ಕೃಷ್ಣ ನಿರ್ದೇಶಿಸಿದ್ದಾರೆ. ಸಾಲು ಸಾಲು ಸಿನಿಮಾ ಆಫರ್ ಸಪ್ತಮಿ ಗೌಡ ಕೈ ಸೇರಿದೆ.