

ಮುಂಬೈ: ಬಾಲಿವುಡ್ ನಟಿ ಸುಶ್ಮಿತಾ ಸೇನ್ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ರೋಹ್ಮನ್ ಶಾಲ್ ಜೊತೆ ಬ್ರೇಕಪ್ ಮಾಡಿಕೊಂಡಿದ್ದ ಸುಶ್ಮಿತಾ ಮತ್ತೆ ಪ್ಯಾಚಪ್ ಆಗಿದ್ದು, ಮದುವೆ ಬಗ್ಗೆ ಪ್ಲಾನ್ ಮಾಡಿದ್ದಾರೆ ಎನ್ನುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.