

ಆಂಧ್ರಪ್ರದೇಶ: ಟಾಲಿವುಡ್ ಚಿತ್ರರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ಬ್ರೋ' ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಈ ಮಧ್ಯೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಮಾಡಿರುವ ಟ್ವೀಟ್ವೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪವನ್ ಕಲ್ಯಾಣ್ ಮತ್ತು ಸಾಯಿ ಧರಂ ತೇಜ್ ಅಭಿನಯದ ಬ್ರೋ ಚಿತ್ರದಲ್ಲಿ 'ಮೈ ಡಿಯರ್ ಮಾರ್ಕಂಡೇಯ' ಹಾಡಿನಲ್ಲಿ ಊರ್ವಶಿ ರೌಟೇಲಾ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ರಿಲೀಸ್ ಕುರಿತು ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡುವ ಸಲುವಾಗಿ ಟ್ವೀಟ್ ಮಾಡಿದ ಅವರು, "ಆಂಧ್ರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ 'ಬ್ರೋ' ಚಿತ್ರದಲ್ಲಿ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದು, ಬಹಳ ಸಂತೋಷವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ. ಸದ್ಯ ಈ ಟ್ವೀಟ್ ಇದೀಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ನೆಟ್ಟಿಗರು, ಸಾಮಾಜಿಕ ಜಾಲತಾಣದಲ್ಲಿ ಊರ್ವಶಿ ರೌಟೇಲಾ ಅವರನ್ನು ಗುರಿಯಾಗಿಸಿಕೊಂಡು ಟ್ರೋಲ್ ಮಾಡುತ್ತಿದ್ದಾರೆ. ಈ ಬಗ್ಗೆ ನಟಿ ಏನು ಹೇಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ,(ಏಜೆನ್ಸೀಸ್).