

ದಿವಂಗತ ನಟ ವಿಷ್ಣುವರ್ಧನ್ಗೆ ಮರಣೋತ್ತರವಾಗಿ 'ಕರ್ನಾಟಕರತ್ನ' ಪ್ರಶಸ್ತಿ ನೀಡುವಂತೆ ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಮಂಗಳವಾರ (ಸೆ.2) ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, '' ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನ ಭೇಟಿಯಾಗಿ ವಿಷ್ಣುವರ್ಧನ್ ಅವರಿಗೆ 'ಕರ್ನಾಟಕರತ್ನ' ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ'' ಎಂದಿದ್ದಾರೆ.
ಅಲ್ಲದೆ, ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.