ಬೀದರ್ ಮೆಡಿಕಲ್ ಕಾಲೇಜಿಗೆ ಹೆಚ್ಚುವರಿ 50 ಸೀಟು ಲಭ್ಯ

kea
Published on

ಬೆಂಗಳೂರು: ಬೀದರ್ ಮೆಡಿಕಲ್ ಕಾಲೇಜಿಗೆ ಹೆಚ್ಚುವರಿ 50 ಸೀಟುಗಳನ್ನು ಹೆಚ್ಚಿಸಿ ವೈದ್ಯಕೀಯ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ದಾಖಲಿಸಲು ಅ.17ರ ಮಧ್ಯಾಹ್ನ 12.30ರವರೆಗೆ ವಿಸ್ತರಿಸಲಾಗಿದೆ.

ವೈದ್ಯಕೀಯ ಕಾಲೇಜಿನಲ್ಲಿ ಈಗಾಗಲೇ ವರದಿ ಮಾಡಿಕೊಂಡಿರುವ ಅಭ್ಯರ್ಥಿಗಳು ಕೂಡ ತಮ್ಮ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net