ರಕ್ಷಾಬಂಧನ ಹಬ್ಬಕ್ಕೆ ಮೋದಿ ಗಿಫ್ಟ್ ಎಂದ ಬಿಎಸ್‌ವೈ

Yadiyurappa
Published on

ಬೆಂಗಳೂರು: ಉಜ್ವಲಾ ಯೋಜನೆಯಡಿ ಅಡುಗೆ ಅನಿಲ ದರ ಕಡಿತ, 200 ರೂ. ಹೆಚ್ಚುವರಿ ಸಬ್ಸಿಡಿ ಘೋಷಿಸಿರುವ ಕೇಂದ್ರ ಸಚಿವ ಸಂಪುಟದ ತೀರ್ಮಾನ ಸ್ವಾಗತಾರ್ಹ. ದುರ್ಬಲ ಮತ್ತು ಮಧ್ಯಮ ವರ್ಗದ ಜನರಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರಂತರ ಪ್ರಯತ್ನಶೀಲವೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶ್ಲಾಸಿದ್ದಾರೆ.

ರಕ್ಷಾಬಂಧನ ಹಬ್ಬಕ್ಕೆ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಗಿಫ್ಟ್ ನೀಡಿದಂತಾಗಿದೆ. ಎಲ್ಲ ತಾಯಂದಿರು ಹಾಗೂ ಸಹೋದರಿಯರಿಗೆ ನೆರವಾಗುವ ಕ್ರಮ ತೆಗೆದುಕೊಂಡಿದ್ದಕ್ಕೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದ್ದಾರೆ.

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ದರ 200 ರೂ. ಇಳಿಕೆಯಾಗಿದೆ. ಉಜ್ವಲ ಯೋಜನೆಯಡಿ ಈಗಾಗಲೇ 200 ರೂ. ನೆರವು ಲಭಿಸುತ್ತಿದ್ದು, 400 ರೂ.ಗೆ ಇಳಿಕೆಯಾಗಲಿದೆ. ಹೊಸದಾಗಿ 75 ಲಕ್ಷ ಉಜ್ವಲ ಗ್ಯಾಸ್ ಸಿಲಿಂಡರ್ ಸಂಪರ್ಕ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಗೆರಹಿತ ಅಡುಗೆ ಸಂಬಂಧ ಕೇಂದ್ರದ ಕ್ರಮ ಅತ್ಯಂತ ಸ್ವಾಗತಾರ್ಹವೆಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net