ರೈತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಿ

3 mlv 4
ಮಳವಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ಸಿದ್ದಲಿಂಗ ಬೇವಿನಮಠ ಮಾತನಾಡಿದರು. ಮಮತಾ, ದೀಪು, ನಿಂಗರಾಜು ಇದ್ದರು.
Published on

ಮಳವಳ್ಳಿ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿರುವ ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವಂತೆ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಸಿದ್ದಲಿಂಗ ಬೇವಿನಮಠ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಗಾರು ಮಳೆ ಉತ್ತಮವಾಗಿ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಹಾಗೂ ಸರ್ಕಾರದಿಂದ ರೈತರಿಗೆ ದೊರೆಯುವ ಇತರ ಸವಲತ್ತುಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಡೆಂೆ ಪ್ರಕರಣಗಳು ಕಂಡುಬಂದಿರುವುದರಿಂದ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮತೆಗೆದುಕೊಳ್ಳಬೇಕು. ಸ್ಥಳೀಯ ಗ್ರಾಪಂಗಳ ಆಡಳಿತದ ವತಿಯಿಂದ ಗ್ರಾಮೀಣ ಮಟ್ಟದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಜನರಲ್ಲಿ ಆರೋಗ್ಯ ಪಾಲನೆಯ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಕಳೆದ ವಾರ್ಷಿಕ ಅವಧಿಯಲ್ಲಿ ಕೃಷಿ, ಅರಣ್ಯ ಮತ್ತು ತೋಟಗಾರಿಕೆ ಇಲಾಖೆಗಳು ನರೇಗಾ ಅನುದಾನದ ನಿಗದಿತ ಗುರಿ ತಲುಪುವಲ್ಲಿ ವಿಫಲವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಅನುದಾನ ಸದ್ಬಳಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು. ಸಭೆಗೆ ಗೈರಾಗಿದ್ದ ಹಲವು ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಇಒ ಮಮತಾ ಅವರಿಗೆ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿನ ಪ್ರಗತಿ ವಿವರಣೆಗಳನ್ನು ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು.
ತಾಪಂ ಇಒ ಮಮತಾ, ಯೋಜನಾಧಿಕಾರಿ ದೀಪು, ಪ್ರಥಮ ದರ್ಜೆ ಲೆಕ್ಕ ಸಹಾಯಕ ನಿಂಗರರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net