ಕಾಂಗ್ರೆಸ್ ಸರ್ಕಾರ ಬಂದ ಆರೇ ತಿಂಗಳಲ್ಲಿ ಎಡಿಜಿಪಿ ಅಲೋಕ್‌ಕುಮಾರ್ 2ನೇ ಬಾರಿ ವರ್ಗಾವಣೆ; ಕುತೂಹಲ ಮೂಡಿಸಿದ ಸರ್ಕಾರದ ನಡೆ

Alok Kumar vvani
Published on

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸೇವೆ ಸಲ್ಲಿಸುತ್ತಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಎಡಿಜಿಪಿ ಡಾ.ಕೆ. ರಾಮಚಂದ್ರ ರಾವ್ ಅವರಿಗೆ ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದ ಸರ್ಕಾರ ಕರ್ನಾಟಕ ಪೊಲೀಸ್ ಗೃಹ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿದೆ.

ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದಿಂದ ಅಲೋಕ್‌ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಕೇವಲ 6 ತಿಂಗಳು ಕಳೆಯುವ ಮೊದಲೇ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಮುಖ್ಯಸ್ಥರಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net