

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಪ್ರಣವ್ ಮೊಹಂತಿ ಅವರನ್ನು ರಾಜ್ಯ ಪೊಲೀಸ್ ಇಲಾಖೆಯ ಕಂಪ್ಯೂಟರ್ ವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಕೇಂದ್ರ ಸರ್ಕಾರದ ‘ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ’(ಯುಐಡಿಎಐ) ಪ್ರಾದೇಶಿಕ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ರಾಜ್ಯ ಪೊಲೀಸ್ ಇಲಾಖೆಗೆ ವಾಪಸ್ ಎಡಿಜಿಪಿ ದರ್ಜೆಗೆ ಬಡ್ತಿ ಪಡೆದಿದ್ದರು.