ಸಿ.ಟಿ.ರವಿ ಅರ್ಜಿ ವಿಚಾರಣೆ ಮುಂದೂಡಿಕೆ

highcourt
Published on

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಸಂಬಂಧ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಎಂಎಲ್‌ಸಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.24ಕ್ಕೆ ಮುಂದೂಡಿದೆ.

ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ನಡೆಸಿತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಲಕ್ಷ್ಮೀ ಪರ ವಕೀಲರ ಮನವಿ ಮೇರೆಗೆ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net