

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತ ಮಹಿಳೆ ಅಪಹರಣ ಆರೋಪ ಸಂಬಂಧ ಎಚ್.ಡಿ. ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕ್ರಿಯೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.
ಪ್ರಕರಣ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿ ಅರ್ಜಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಲು ಕಾಲಾವಕಾಶ ನೀಡಬೇಕೆಂದು ಕೋರಿದರು. ಈ ಮನವಿ ಒಪ್ಪಿದ ನ್ಯಾಯಪೀಠ ವಿಚಾರಣೆ ಮುಂದೂಡಿ, ಹಿಂದಿನ ಮಧ್ಯಂತರ ಆದೇಶವನ್ನು ೆ.7ರವರೆಗೆ ವಿಸ್ತರಿಸಿ ಆದೇಶ ಮಾಡಿತು.