ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪ್ರವೇಶ ಪತ್ರ ಪ್ರಕಟ

SSLC Exam
Published on

ಬೆಂಗಳೂರು ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಶಾಲಾ ಮುಖ್ಯ ಶಿಕ್ಷಕರು ತಮ್ಮ ಲಾಗಿನ್‌ನಲ್ಲಿರುವ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ವಿದ್ಯಾರ್ಥಿಗಳಿಗೆ ವಿತರಣೆ ಮಾಡಬೇಕು. ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡು ಬಂದಲ್ಲಿ ಕೂಡಲೇ ಮಂಡಳಿಯು ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ನಿಗದಿತ ಸಮಯದಲ್ಲಿ ವಿತರಣೆ ಮಾಡುವಂತೆ ಮಂಡಳಿ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.

ತಮ್ಮ ಶಾಲೆಯಲ್ಲಿ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪ್ರವೇಶಪತ್ರ ಬಾರದಿದ್ದಲ್ಲಿ ಸಂಬಂಧಪಟ್ಟ ಮಾಹಿತಿಯನ್ನು ಕೂಡಲೇ ಮಂಡಳಿಗೆ ಕಳುಹಿಸಿಕೊಡುವಂತೆ ತಿಳಿಸಿದ್ದಾರೆ.

ಭಾವಚಿತ್ರವಿಲ್ಲದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಇದರಿಂದ ವಿದ್ಯಾರ್ಥಿಗೆ ಆಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದರ ಜವಾಬ್ದಾರಿ ಹೊರುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು ಹಾಜರಾತಿ ಕೊರತೆಯಿಂದ ಮೊದಲ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ 2ನೇ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತಿದೆ. ಈ ಸಂಬಂಧ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. 2ನೇ ಪರೀಕ್ಷೆಯು ಜೂ.14ರಿಂದ 22ರವರೆಗೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net