ವ್ಯಸನಮುಕ್ತ ಜೀವನ ರೂಢಿಸಿಕೊಳ್ಳಿ

ಬೆಟ್ಟದಪುರ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಬೆಟ್ಟದಪುರ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
Published on

ಬೆಟ್ಟದಪುರ: ದೇಹ ಮನಸ್ಸು ಅರೋಗ್ಯವಾಗಿಟ್ಟುಕೊಂಡು ಸ್ವಸ್ಥ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ವ್ಯಸನಮುಕ್ತ ಜೀವನವನ್ನು ರೂಢಿಸಿಕೊಳ್ಳಬೇಕು ಎಂದು ಬೆಟ್ಟದಪುರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಎಂ.ಎ.ತ್ತಿನಮನಿ ಸಲಹೆ ನೀಡಿದರು.

ಬೆಟ್ಟದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬೆಟ್ಟದಪುರ ಪೊಲೀಸ್ ಠಾಣೆ ವತಿಯಿಂದ ಬುಧವಾರ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ಯುವ ಜನಾಂಗ ಮದ್ಯಪಾನ, ತಂಬಾಕು, ಗಾಂಜಾ ಮುಂತಾದ ಮಾದಕ ವಸ್ತುಗಳ ಸೇವನೆ ಚಟಕ್ಕೆ ಬಲಿಯಾಗಿದ್ದು, ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಮಕ್ಕಳು ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಅರಿತು ಆದರ್ಶಮಯ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು. ನಂತರ ಬೆಟ್ಟದಪುರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರೊಂದಿಗೆ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಬ್ ಇನ್ಸ್‌ಪೆಕ್ಟರ್ ಸ್ವಾಮಿನಾಯಕ, ಸಿಬ್ಬಂದಿ ನಯೀಮ್, ರವೀಶ್, ಅರೋಗ್ಯ ಇಲಾಖೆಯ ಚನ್ನಮ್ಮ, ದೇವಕಿ, ಕುಸುಮಾ, ಮಂಜು, ಶಿಕ್ಷಕರಾದ ಸೋಮಯ್ಯ ನಾಯಕ್, ಗೊರಳ್ಳಿ ಜಗದೀಶ್, ಆಲನಹಳ್ಳಿ ಕೆಂಪರಾಜು, ಮಮತಾ ನಾಯಕ್, ಬಿ.ಎನ್ ಜ್ಯೋತಿ, ಅವಿನಾಶ್, ಕಾವ್ಯಾ, ಅಲ್ಸಾ, ಇಂದ್ರಮ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net