

ರಾಯಚೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮಂಗಳವಾರ ಕನ್ನಡ ಭವನದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಶಂಕರಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯರಲ್ಲಿ ಶಂಕರಾಚಾರ್ಯರು ಮೊದಲಿಗರಾಗಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಅಭಿವೃದ್ಧಿಗೆ ಕಾರ್ಯದಲ್ಲಿ ಮುಂದಾಗಬೇಕು ಎಂದರು. ಸಿಬ್ಬಂದಿ ರಮೇಶ, ಇಸ್ಮಾಯಿಲ್, ಶ್ರೀದೇವಿ, ವಿನೋದಕುಮಾರ, ಶಿಕ್ಷಕ ದಂಡಪ್ಪ ಬಿರಾದರ ಇದ್ದರು.