ಶರಣರ ತತ್ವಾದರ್ಶ ಅಳವಡಿಸಿಕೊಳ್ಳಿ

16
Published on


ಮೈಸೂರು:
ಸಮಾಜದ ಹಿತ ದೃಷ್ಟಿಯಿಂದ ಬಸವಾದಿ ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಹೇಳಿದರು.

ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟದಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಬಸವಾದಿ ಶರಣರು ಮಹತ್ವದ ಪಾತ್ರ ವಹಿಸಿದರು. ನೇರ ನಡೆ, ನುಡಿ, ನಿಷ್ಟೆಯಿಂದ ಬದುಕುವುದು ಬಸವಾದಿ ಶರಣರ ಮೂಲ ತತ್ವವಾಗಿತ್ತು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net