

ಅಮೆರಿಕಾ: ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ಅಭಿನಯದ ಬಹುನಿರೀಕ್ಷಿತ 'ಲಿಯೋ' ಚಿತ್ರಕ್ಕೆ ಭಾರೀ ನಿರೀಕ್ಷೆಗಳು ವ್ಯಾಪಕವಾಗಿ ವ್ಯಕ್ತವಾಗಿದ್ದು, ಅಮೆರಿಕಾದಲ್ಲಿ ತೆರೆಯಲಾದ ಮುಂಗಡ ಬುಕ್ಕಿಂಗ್ಸ್ಗೆ ಇದೀಗ ಭರ್ಜರಿ ರೆಸ್ಪಾನ್ಸ್ ದೊರಕಿದೆ.
ಲೋಕೇಶ್ ಕನಕರಾಜ್ ನಿರ್ದೇಶನದ ಈ ಚಿತ್ರವು ಇದೇ ಅಕ್ಟೋಬರ್ 19 ರಂದು ಜಾಗತಿಕವಾಗಿ ಬಹುತೇಕ ಚಿತ್ರಮಂದಿರಗಳಲ್ಲಿ ಅದ್ದೂರಿ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಅಮೆರಿಕಾದಲ್ಲಿ 'ಲಿಯೋ' ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ಸ್ ತೆರೆಯಲಾಗಿದ್ದು, ಈಗಾಗಲೇ 350K ಡಾಲರ್ ಗಳಿಸುವ ಮುಖೇನ 13,000 ಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.
ಈ ಸುದ್ದಿ ಸದ್ಯ ಚಿತ್ರತಂಡಕ್ಕೆ ಭಾರೀ ಸಂತಸ ನೀಡಿದ್ದು, ಚಿತ್ರವನ್ನು ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಸಿನಿಪ್ರೇಕ್ಷಕರು ಮತ್ತು ವಿಜಯ್ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ.
ಚಿತ್ರದಲ್ಲಿ ಸಂಜಯ್ ದತ್, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಗೌತಮ್ ವಾಸುದೇವ್ ಮೆನನ್, ಮಿಸ್ಕಿನ್, ಸಂತಿ ಮಾಯಾದೇವಿ, ಮ್ಯಾಥ್ಯೂ ಥಾಮಸ್, ಮನ್ಸೂರ್ ಅಲಿ ಖಾನ್ ಮುಂತಾದವರ ತಾರಾಗಣವಿದೆ,(ಏಜೆನ್ಸೀಸ್).