ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು ತರಬೇತಿ ಕಾರ್ಯಾಗಾರ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು ವಿಷಯದ ಮೇಲೆ ಜೂನ್ 16 ರಿಂದ ಜೂನ್ 20 ರವರೆಗೆ 5 ದಿನಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ.

Published on
ಮಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು ವಿಷಯದ ಮೇಲೆ ಜೂನ್ 16 ರಿಂದ ಜೂನ್ 20 ರವರೆಗೆ 5 ದಿನಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು, ವಿಜ್ಞಾನಾಸಕ್ತರು ಹಾಗೂ ಕೈಗಾರಿಕೋದ್ಯಮದ ಪ್ರತಿನಿಧಿಗಳು ಭಾಗವಹಿಸಬಹುದು. ಆಸಕ್ತರು ಜೂನ್ 12 ರೊಳಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕಾರ್ಯಾಗಾರದ ಸಂಯೋಜಕ ವಿ. ಜಿ. ಉಮೇಶ ವೈಜ್ಞಾನಿಕಾಧಿಕಾರಿ ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ವೆಬ್‌ಸೈಟ್‌ನನು ವೀಕ್ಷಿಸಬಹುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net