ರಾಜ್ಯದಲ್ಲಿ ಮತ್ತೆ ಜಾಹೀರಾತು ಸಮರ, ದಸರಾ ಶುಭಾಶಯ ನೆಪದಲ್ಲಿ ಬಿಜೆಪಿ, ಜೆಡಿಎಸ್​ಗೆ ಕಾಂಗ್ರೆಸ್​ ತಿರುಗೇಟು!

add
Published on

ದಸರಾ ಶುಭಾಶಯ ಕೋರುವ ಜಾಹೀರಾತು ನೆಪದಲ್ಲೇ ವಿರೋಧ ಪಕ್ಷಕ್ಕೆ ಕಾಂಗ್ರೆಸ್​ ಕೌಂಟರ್ ಕೊಟ್ಟಿದೆ. ದಸರಾಗೆ ಶುಭಾಶಯ ಕೋರುವ ಸರ್ಕಾರದ ಜಾಹೀರಾತಿನ ಮೂಲಕ ಬಿಜೆಪಿ ಹಾಗೂ ಜೆಡಿಎಸ್​​ಗೆ ಕಾಂಗ್ರೆಸ್​ ತಿರುಗೇಟು ಕೊಟ್ಟಿದೆ. ವಾಮಮಾರ್ಗದಿಂದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುವುದಿಲ್ಲ ಎಂದು ದೋಸ್ತಿ ನಾಯಕರಿಗೆ ಜಾಹೀರಾತು ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಂದು ತಿರುಗೇಟು ನೀಡಿದೆ.

ಇದಿಷ್ಟೇ ಅಲ್ಲ, ನವರಾತ್ರಿಯಲ್ಲಿ ಸಂಹರಿಸಬೇಕಾದ ವಿನಾಶಕಾರಿ ಶಕ್ತಿಗಳನ್ನೂ ಜಾಹೀರಾತಿನಲ್ಲಿ ಉಲ್ಲೇಖ ಮಾಡಲಾಗಿದೆ.
‘ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ.’ ಇದು ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಜಾಹೀರಾತು! ಇಂದು ಬೆಳ್ಳಂಬೆಳಗ್ಗೆಯೇ ಎಲ್ಲಾ ಪತ್ರಿಕೆಗಳ ಮುಖಪುಟದಲ್ಲೇ ಪ್ರಕಟಿಸಲಾದ ಜಾಹೀರಾತಾಗಿದೆ.

ಕಾಂಗ್ರೆಸ್​ ಜಾಹೀರಾತಿಗೆ ಜೆಡಿಎಸ್, ಬಿಜೆಪಿ ನಾಯಕರ ಕೌಂಟರ್
ಕಾಂಗ್ರೆಸ್​ ಜಾಹೀರಾತಿನ ಬಗ್ಗೆ ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ರಾಜ್ಯವನ್ನು ಮೋಸದಿಂದ ಸ್ಥಿರಗೊಳಿಸಲು ಸರ್ಕಾರ ಹೊರಟಿದೆ. ಸ್ಥಿರಗೊಳಿಸುವುದು, ಅಸ್ಥಿರಗೊಳಿಸುವುದು ನಮ್ಮ ಕೈಯಲ್ಲಿ ಇಲ್ಲ, ಚಾಮುಂಡಿ ತಾಯಿ ಕೈಯಲ್ಲಿ ಇದೆ ಎಂದು ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net