ನಟಿಮಣಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಮತ್ತೋರ್ವ ಆಫ್ರಿಕನ್​ ಪೆಡ್ಲರ್​ ಅರೆಸ್ಟ್​​

Drug Peddler
Published on

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಗ್ಯಾಂಗ್​ಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಮತ್ತೋರ್ವ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾದ ಬೆನಾಲ್ಡ್ ಉಡೇನ್ನಾ(35) ಬಂಧಿತ. ಈತ ಪೇಜ್​-3 ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಬಹುಮುಖ್ಯ ಪೆಡ್ಲರ್ ಆಗಿದ್ದ. ತನಿಖೆ ವೇಳೆ ಸಿಕ್ಕ ಮಾಹಿತಿ ಮೇರೆಗೆ ಆತನನ್ನು ಬಂಧಿಸಿ, ಮೂರು ಸಿಮ್​​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಂಟಿ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net