ಬಿಹಾರ ಬಳಿಕ ಮಣಿಪುರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ

Untitled design
Published on

ಗುವಾಹತಿ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್) ನಡೆಯುತ್ತಿದೆ. ಬಿಹಾರದ ಬಳಿಕ ಮಣಿಪುರದಲ್ಲಿ ಎಸ್​ಐಆರ್ ನಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮಣಿಪುರದಲ್ಲಿ ಪ್ರಸ್ತುತ ರಾಷ್ಟ್ರಪತಿ ಆಳ್ವಿಕೆ ಇದ್ದು, 2027 ರಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಬಿಹಾರದಂತೆ ಮಣಿಪುರದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಚುನಾವಣಾ ಆಯೋಗ ಪರಿಶೀಲಿಸುತ್ತಿದೆ.

ಸುಪ್ರೀಂ ಕೋರ್ಟ್​ನಲ್ಲಿ ಬಿಹಾರ ಎಸ್​ಐಆರ್ ಕುರಿತು ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ತೀರ್ಪಿನ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. 2023ರ ಮೇ ನಿಂದ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ವಿಧಾನಸಭೆಯನ್ನು ಅಮಾನತಿನಲ್ಲಿರಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಇದನ್ನು 2026ರ ಫೆಬ್ರವರಿಯವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ಲೋಕಸಭೆ ಅನುಮೋದನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net