

ನವದೆಹಲಿ: ತೆಲಂಗಾಣದಲ್ಲಿ ಮುಂಬರುವ ರಾಜ್ಯಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭಿಷೇಕ್ ಮನು ಸಿಂಘ್ವಿ ಅವರನ್ನು ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡಿದೆ.
ರಾಜ್ಯ ವಿಧಾನಸಭೆಯಿಂದ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ್ ರಾಷ್ಟ್ರ ಸಮಿತಿಯ ಮಾಜಿ ಸಂಸದ ಕೆ.ಕೇಶವ ರಾವ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ನಂತರ ಆ ಸ್ಥಾನ ತೆರವಾಗಿತ್ತು. ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ.