ಬಜೆಟ್ ಮಂಡನೆ ಬಳಿಕ: ಮತ್ತೆ ಸಂಪುಟ ವಿಸ್ತರಣೆ

BSY
Published on

ನವದೆಹಲಿ: ರಾಜ್ಯ ಬಜೆಟ್ ಅಧಿವೇಶನ ಬಳಿಕ ಸಚಿವ ಸಂಪುಟ ವಿಸ್ತರಣೆ ಸುಳಿವನ್ನು ಸಿಎಂ ಯಡಿಯೂರಪ್ಪ ನೀಡಿದ್ದು, ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಸೇರ್ಪಡೆಗೊಳ್ಳಲಿದ್ದಾರೆ. ಅಲ್ಲದೆ, ಇನ್ನಿಬ್ಬರಿಗೆ ಅವಕಾಶ ನೀಡಲಾಗುವುದು ಎಂದು ಬಿಎಸ್​ವೈ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಲಾಗಿದ್ದ ಭೋಜನ ಕೂಟದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಆಗಮಿಸಿದ್ದ ಯಡಿಯೂರಪ್ಪ ಪತ್ರಕರ್ತರೊಂದಿಗೆ ಮಾತನಾಡಿ, ಬೇರೆ ಪಕ್ಷದಿಂದ ಬಂದವರಿಗೆ ಸೂಕ್ತ ಸ್ಥಾನಮಾನ ನೀಡಿದ್ದೇವೆ. ಈಗ ನಮ್ಮ ಪಕ್ಷದವರಿಗೆ ಅವಕಾಶ ನೀಡಬೇಕಿದೆ ಎಂದರು.

ಬಜೆಟ್ ಮಂಡನೆಗೆ ಪೂರ್ವಭಾವಿ ಸಿದ್ಧತೆ ಆಗುತ್ತಿದೆ. ಅನ್ನಭಾಗ್ಯ ಯೋಜನೆಯಲ್ಲಿ ನೀಡಲಾಗುತ್ತಿರುವ ಅಕ್ಕಿ ಪ್ರಮಾಣದಲ್ಲಿ 2 ಕೆ.ಜಿ. ಕಡಿತಗೊಳಿಸಿ, 2 ಕಿಲೋ ಗೋಧಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಮಾಹಿತಿ ಹಂಚಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net