ಮತ್ತೆ ಸೆಮಿ ಲಾಕ್​ಡೌನ್?: ದೆಹಲಿಯಿಂದ ಸಿಎಂ ಬಂದ ಬಳಿಕ ತೀರ್ಮಾನ; ಇಂದು ತಜ್ಞರ ಜತೆ ಸಭೆ

State
ಬೆಳಗಾವಿಯ ಸುವರ್ಣ ವಿಧಾನಸೌಧದದಲ್ಲಿ ಡಿ.13ರಂದು ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಕಾರ್ವಿುಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಅಧಿವೇಶನ ವೀಕ್ಷಣೆಗೆ ವಿದ್ಯಾರ್ಥಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಪತ್ತೆ ಹಿನ್ನೆಲೆಯಲ್ಲಿ ದೊಡ್ಡ ಸಭೆ, ಸಮಾರಂಭಗಳಿಗೆ ಕಡಿವಾಣ ಹಾಕಬೇಕಿದೆ. ಒಳಾಂಗಣ ಕಾರ್ಯಕ್ರಮಕ್ಕೂ ಬ್ರೇಕ್ ಹಾಕಬೇಕಿದೆ. ಸಿಎಂ ಕೇಂದ್ರ ಆರೋಗ್ಯ ಸಚಿವರ ಜತೆ ರ್ಚಚಿಸಿದ್ದಾರೆ. ಶುಕ್ರವಾರ ರಾಜ್ಯಕ್ಕೆ ವಾಪಸಾದ ಮೇಲೆ ಸಭೆ ಮಾಡುತ್ತಾರೆ. ಈ ಸಭೆಯಲ್ಲಿ ಮಾರ್ಗಸೂಚಿಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಎರಡನೇ ಡೋಸ್ ಪಡೆದವರ ಪ್ರಮಾಣ ಶೇ.62ಕ್ಕೆ ಏರಿದೆ. ಬುಧವಾರ ನಡೆದ ಈ ಮೇಳದಿಂದ ಮೊದಲ ಡೋಸ್ ಪಡೆದವರ ಪ್ರಮಾಣ ಶೇ.92ಕ್ಕೆ ತಲುಪಿದೆ. ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ಲಸಿಕೆ ನೀಡುವಲ್ಲಿ 2 ಅಥವಾ 3ನೇ ಸ್ಥಾನದಲ್ಲಿದೆ ಎಂದರು.

ಮುಂದುವರಿದ ದೇಶಗಳಲ್ಲಿ ಕೂಡ ಲಸಿಕೆ ತೆಗೆದುಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಜನರು ದೊಡ್ಡ ಪ್ರಮಾಣದಲ್ಲಿ ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ. ಸಂಪೂರ್ಣ ರೋಗ ನಿರೋಧಕ ಶಕ್ತಿಗಾಗಿ ಹಾಗೂ ವೈರಾಣು ವಿರುದ್ಧ ಸದೃಢವಾಗಿ ಹೋರಾಡಲು 2 ಡೋಸ್ ತೆಗೆದುಕೊಳ್ಳಬೇಕು ಎಂದರು.

ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಬಂದ ಪ್ರಯಾಣಿಕರಿಗೆ ತಪಾಸಣೆ, ಪರೀಕ್ಷೆ ಬಗ್ಗೆ ಸೂಚನೆ ನೀಡಲಾಗಿದೆ. ಇಲ್ಲಿ ಅಬೋಟ್ ಮತ್ತು ಆರ್​ಟಿಪಿಸಿಆರ್ ಎಂಬ ಎರಡು ರೀತಿಯ ಪರೀಕ್ಷೆಗಳು ನಡೆಯಲಿದ್ದು, ಅಬೋಟ್ೆಗೆ ಕೇಂದ್ರ ಸರ್ಕಾರ 3,000 ರೂ. ನಿಗದಿಪಡಿಸಿದೆ. ಅಬೋಟ್​ನಿಂದ ಕೇವಲ ಅರ್ಧ ಅಥವಾ 1 ಗಂಟೆಯೊಳಗೆ ಫಲಿತಾಂಶ ಪಡೆಯಬಹುದು. ಅಬೋಟ್ ಪರೀಕ್ಷೆಯಲ್ಲಿ ನಿಖರತೆ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ ಅಬೋಟ್ ಕೂಡ ಆರ್​ಟಿಪಿಸಿಆರ್​ನಷ್ಟೇ ನಿಖರತೆ ಹೊಂದಿದೆ ಎಂದು ಸ್ಪಷ್ಟಪಡಿಸಿದರು. ಆರ್​ಟಿಪಿಸಿಆರ್ ಪರೀಕ್ಷೆಗೆ 500 ರೂ. ಶುಲ್ಕವಿದ್ದು, 3ರಿಂದ 4 ತಾಸಿನಲ್ಲಿ ಫಲಿತಾಂಶ ಲಭಿಸಲಿದೆ ಎಂದರು.

ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್​ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು. ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವ 11 ದೇಶಗಳ ಪರಿಸ್ಥಿತಿ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು.

| ಡಾ.ಸಿ.ಎನ್.ಅಶ್ವತ್ಥನಾರಾಯಣ ಸಚಿವ

ಇವುಗಳನ್ನು ತಪ್ಪದೇ ಪಾಲಿಸಿ

  • ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗಬೇಡಿ
  • ಹೆಚ್ಚು ಜನರು ಇರುವ ಕಡೆ ಸೇರಬೇಡಿ
  • ಮಾಸ್ಕ್, ಸಾಮಾಜಿಕ ಅಂತರ, ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಿ
  • ಮನೆಯಲ್ಲಿ ತಯಾರಿಸಿದ ಶುಚಿಯಾದ ತಾಜಾ ಆಹಾರವನ್ನೇ ಸೇವಿಸಿ
  • ಚಳಿಗಾಲ ಆಗಿರುವು ದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ

ತಜ್ಞರ ಎಚ್ಚರಿಕೆ ಏನು?

  • ಜನರು ಲಸಿಕೆ ಪಡೆದಿದ್ದರೂ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡಿ
  • ಕೈಗಳ ಸ್ವಚ್ಛತೆ ಸೇರಿದಂತೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
  • ಕೋವಿಡ್ ವೈರಾಣು ಪ್ರತಿ ಆರು ಅಥವಾ ಒಂಬತ್ತು ತಿಂಗಳಿಗೆ ರೂಪಾಂತರ ಹೊಂದುತ್ತದೆ.
  • ಡೆಲ್ಟಾಗಿಂತ ವೇಗವಾಗಿ ಹರಡುತ್ತದೆ. ಹಾಗಾಗಿ ಜನರು ಜಾಗೃತೆ ವಹಿಸುವ ಅಗತ್ಯವಿದೆ.
  • ಎಲ್ಲಿ ಜಿನೋಮಿಕ್ ಸೀಕ್ವೆನ್ಸಿಸ್ ಪರೀಕ್ಷೆ ಹೆಚ್ಚು ಪ್ರಮಾಣದಲ್ಲಿ ನಡೆಸುತ್ತಾರೋ ಅಲ್ಲಿ ಬೇಗ ಪತ್ತೆಯಾಗುತ್ತೆ.
  • ರೋಗ ಲಕ್ಷಣ ಕಂಡುಬಂದರೆ ನಿರ್ಲಕ್ಷ್ಯ ತೋರದೆ ಕೂಡಲೇ ತಪಾಸಣೆ ಮಾಡಿಸಿ
  • ಆಫ್ರಿಕಾ ದೇಶದಲ್ಲಿ ಶೇ. 10ರಷ್ಟು ಮಾತ್ರ ಲಸಿಕೆ ತೆಗೆದುಕೊಂಡಿದ್ದು, ಅಲ್ಲಿ ಹೆಚ್ಚು ಪ್ರಮಾಣದಲ್ಲಿ ಸೋಂಕು
  • ಜನರು ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. 2ನೇ ಡೋಸ್ ಪಡೆದುಕೊಳ್ಳಿ

363 ಪ್ರಕರಣ ದೃಢ: ರಾಜ್ಯದಲ್ಲಿ ಗುರುವಾರ 363 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 191 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಒಟ್ಟು ಸಂಖ್ಯೆ 29.51 ಲಕ್ಷ ಮೀರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,743 ತಲುಪಿದೆ. ಈವರೆಗೂ 38,216 ಮಂದಿ ಸಾವಿಗೀಡಾಗಿದ್ದು, 29.96 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ. ಬೆಂಗಳೂರು ನಗರದಲ್ಲಿ 206, ಉತ್ತರ ಕನ್ನಡ 22, ದಕ್ಷಿಣ ಕನ್ನಡ 20, ಮೈಸೂರು 19, ಚಾಮರಾಜನಗರ 12, ಉಡುಪಿ 10 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಹಾಸನದಲ್ಲಿ ಒಬ್ಬರು ಸೇರಿ ಮೂವರು ಮೃತಪಟ್ಟಿದ್ದಾರೆ.

30 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕರೊನಾ: ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ 30 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಸಾಗರ ರಸ್ತೆಯ ಗಾಡಿಕೊಪ್ಪದ ಬಳಿ ವಾಸವಿರುವ ವಿದ್ಯಾರ್ಥಿಗಳು ವಾರದ ಹಿಂದಷ್ಟೇ ಕೇರಳದಿಂದ ಬಂದಿದ್ದರು. ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದ್ದು ಗುರá-ವಾರ ಸೋಂಕು ಇರá-ವುದು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ನರ್ಸಿಂಗ್ ಕಾಲೇಜನ್ನು ಸೀಲ್​ಡೌನ್ ಮಾಡಲಾಗಿದೆ. ಜತೆಗೆ ಹಾಸ್ಟೆಲ್ ಮತ್ತು ಆಸ್ಪತ್ರೆಯ ಒಪಿಡಿ ಬಂದ್ ಮಾಡಲಾಗಿದೆ. ಕಾಲೇಜು ಮತ್ತು ಆಸ್ಪತ್ರೆಯ ಎಲ್ಲ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಸೋಂಕಿತರ ಮಾದರಿ ಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳá-ಹಿಸಲಾಗá-ವುದು ಎಂದು ಡಿಸಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net