

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2024ರ ಸೆ.20ರಂದು ಹೊರಡಿಸಿದ್ದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ (ಕಲ್ಯಾಣ ಕರ್ನಾಟಕ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸೆ.6ರಂದು ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಸೆ.7ರಂದು ಬೆಳಗ್ಗೆ 10ರಿಂದ 11.30ರವರೆಗೆ ಪತ್ರಿಕೆ-1ರ ಸಾಮಾನ್ಯ ಪತ್ರಿಕೆ ಮತ್ತು ಅದೇ ದಿನ ಮಧ್ಯಾಹ್ನ 2ರಿಂದ 4ರವರೆಗೆ ಪತ್ರಿಕೆ-2ರ ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಯಲಿದೆ. ಅ.4ರಂದು ಮಧ್ಯಾಹ್ನ 2ರಿಂದ 4ರವರೆಗೆ ಪತ್ರಿಕೆ-2ರ ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಇ ಪ್ರಕಟಣೆ ಹೊರಡಿಸಿದೆ.