ಐಚನಹಳ್ಳಿ ಡೇರಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

28BTP01
ಐಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ವೈರಮುಡಿ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮಹದೇವ ನಾಯಕ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಿರ್ದೇಶಕರು ಮತ್ತು ಮುಖಂಡರು ಅಭಿನಂದನೆ ಸಲ್ಲಿಸಿದರು.
Published on

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಸಮೀಪದ ಐಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ವೈರಮುಡಿ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮಹದೇವ ನಾಯಕ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡು ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅಶ್ವಿನ್‌ಕುಮಾರ್ ಘೋಷಿಸಿದರು.

ಅಧ್ಯಕ್ಷ ವೈರಮುಡಿಶೆಟ್ಟಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುವ ಮೂಲಕ ಶ್ರಮಿಸುತ್ತೇನೆ. ಹಾಲು ಉತ್ಪಾದಕರು ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಅವರು ಕೈಜೋಡಿಸಬೇಕು. ಅವಿರೋಧವಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಮುಖಂಡರು ಎಲ್ಲರಿಗೂ ಧನ್ಯವಾದಗಳು ಎಂದರು.

ನಿರ್ದೇಶಕರಾದ ರವಿ, ಸಿದ್ದನಾಯಕ, ನಾಗೇಶ್, ರಾಜೇಗೌಡ, ಸಿ.ವೈರಮುಡಿ ಶೆಟ್ಟಿ, ಗಾಯತ್ರಿ, ನಾಗಮ್ಮ, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಟಿ.ಹನುಮಂತ್, ಸಂಘದ ಕಾರ್ಯದರ್ಶಿ ನಾಗನಾಯಕ, ಸಿಬ್ಬಂದಿ ಚಂದ್ರೇಗೌಡ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.

ಐಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ವೈರಮುಡಿ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮಹದೇವ ನಾಯಕ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಿರ್ದೇಶಕರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net