ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ 14ರಂದು

Oplus_16908288
Oplus_16908288
Published on

ರಾಣೆಬೆನ್ನೂರ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸೆ. 14ರಂದು ಬೆಳಗ್ಗೆ 9.30ಕ್ಕೆ ನಗರದ ಮೃತ್ಯುಂಜಯ ಸಭಾಭವನದಲ್ಲಿ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾಥಿರ್ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ನಾಗರಾಜ ನಲವಾಗಲ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಸಮಾರಂಭ ಉದ್ಘಾಟಿಸುವರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ವಿತರಣೆ ಮಾಡುವರು. ಯುಎಸ್​ಎ ಪಾರ್ಥಸಾರಥಿ ವಿದ್ಯಾಥಿರ್ ಪುರಸ್ಕಾರ ನೀಡುವರು.

ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಾಸಕರಾದ ರುದ್ರಪ್ಪ ಲಮಾಣಿ, ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ, ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಸಂಘದ ರಾಜ್ಯ ಗೌರವಾಧ್ಯಕ್ಷ ಡಾ. ಕೆ. ಹನುಮಂತಪ್ಪ ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಪ್ರಮುಖರಾದ ಮಾಲತೇಶ ಎಂ., ಎಸ್​.ಎಚ್​. ಪಾಟೀಲ, ಮಾರುತಿ ಲಮಾಣಿ, ಎಂ.ಎಸ್​. ಪಾಟೀಲ, ಬಸವರಾಜ ನಾಯಕ, ಮಧು ಅಳಲಗೇರಿ, ಸುಧಾ ಕೋಟಿಹಾಳ, ಎಸ್​.ಸಿ. ಹಿರೇಮಠ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net