ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ

Oplus_16908288
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಬಿ. ಅಶ್ವಿತಾ , ದಯಾನಂದ್, ರುದ್ರ, ಬಸವರಾಜು ಇದ್ದರು.
Published on

ವಿರಾಜಪೇಟೆ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಅಶ್ವಿತಾ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಏಡ್ಸ್‌ನ ಇತಿಹಾಸ, ಅದರ ಹರಡುವಿಕೆಗೆ ಕಾರಣಗಳು, ಸರ್ಕಾರ ಅದನ್ನು ನಿಯಂತ್ರಿಸಲು ಕೈಗೊಳ್ಳುತ್ತಿರುವ ಕ್ರಮಗಳು, ಕಾಯಿದೆ, ಕಳಂಕ ತಾರತಮ್ಯದ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಮಾತನಾಡಿ, ಏಡ್ಸ್ ನಿಯಂತ್ರಿಸುವುದರಲ್ಲಿ ಯುವಜನತೆ ಪಾತ್ರದ ಬಗ್ಗೆ ತಿಳಿಸಿದರು. ಏಡ್ಸ್ ಜಾಗೃತಿ ಕುರಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನ ಐಕ್ಯುಎಸಿ ಸಂಚಾಲಕ ಡಾ.ಕೆ.ಬಸವರಾಜು, ರೆಡ್ ರಿಬ್ಬನ್ ಕ್ಲಬ್ ಸಂಚಾಲಕ ರುದ್ರ, ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net