ಭಾರತ ಪ್ರವಾಸ ಕೈಗೊಂಡ ಮಾಲ್ಡೀವ್ಸ್​ ವಿದೇಶಾಂಗ ಸಚಿವ ಮೂಸಾ ಜಮೀರ್!

jai
Published on

ಮಾಲೆ: ಮಾಲ್ಡೀವ್ಸ್​ನ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಬುಧವಾರದಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ.

ಈ ಸಮಯದಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈ ಶಂಕರ್​ ಅವರನ್ನು ಭೇಟಿಯಾಗಲಿದ್ದು ಮೊದಲ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಲಿದ್ದಾರೆ.

ಮೇ 8 ರಿಂದ 10ರ ಅವಧಿಯಲ್ಲಿ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ದೀರ್ಘಾಕಾಲದ ಪಾಲುದಾರಿಕೆ ಬಲಗೊಳಿಸಿಸುವ ಮತ್ತು ಇನ್ನಷ್ಟು ವಿಸ್ತರಿಸುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಚೀನಾ ಪರ ಒಲವುಳ್ಳ ಅಲ್ಲಿನ ಅಧ್ಯಕ್ಷ ಮೊಹಮ್ಮದ್​ ಮಯಿಝು ಅವರು ಅಧಿಕಾರ ವಹಿಸಿಕೊಂಡ ಆರು ತಿಂಗಳಾಗಿದ್ದು ಈ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ. ಈ ವೇಳೆ ಮಾಲ್ಡೀವ್ಸ್​ನ ಉನ್ನತಮಟ್ಟದ ಅಧಿಕಾರಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತೆ ಮರುಕಳಿಸುತ್ತ ಎಂಬುದು ಕುತೂಹಲ ಮೂಡಿಸಿದೆ.

ನನ್ನ ಮೊದಲ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ನಿರ್ಗಮಿಸುತ್ತಿದ್ದೇನೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಜೈ ಶಂಕರ್​ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮಾಲ್ಡೀವ್ಸ್​ನ ವಿದೇಶಾಂಗ ಸಚಿವ ಮೂಸಾ ಜಮೀರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net