ICU ವೆಂಟಿಲೇಟರ್‌ನಲ್ಲಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ! Air Hostess

Air Hostess
Published on

Air Hostess | ಗಗನಸಖಿಯೊಬ್ಬರು ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನಲಾದ ಘಟನೆ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಏ. 6 ರಂದು ನಡೆದಿದ್ದರೂ ಆಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದ ದಿನದ ನಂತರ ಏ. 14 ರಂದು ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಗುರುಗ್ರಾಮ ಪೊಲೀಸರು ತಿಳಿಸಿದ್ದಾರೆ.

46 ವರ್ಷದ ಮಹಿಳೆ ತಾನು ತಂಗಿದ್ದ ಹೋಟೆಲ್​ನ ಸ್ವಿಮ್ಮಿಂಗ್​​ ಪೂಲ್​ನಲ್ಲಿ ಈಜುವಾಗ ಅಸ್ಥಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 5 ರಂದು ಆಕೆಯನ್ನು ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಭಾನುವಾರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ನಂತರ ಆಕೆ ತಾನು ಏ. 6 ರಂದು ವೆಂಟಿಲೇಟರ್‌ನಲ್ಲಿದ್ದಾಗ ಕೆಲವು ಆಸ್ಪತ್ರೆಯ ಸಿಬ್ಬಂದಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಡಿಸ್ಚಾರ್ಜ್ ಆದ ನಂತರ ಆಕೆ ನಡೆದ ಘಟನೆಗಳ ಬಗ್ಗೆ ತನ್ನ ಪತಿಗೆ ತಿಳಿಸಿದ್ದು, ತಾನು ವೆಂಟಿಲೇಟರ್‌ನಲ್ಲಿದ್ದಾಗ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಆದರೆ ತಾನು ಆ ಸಮಯದಲ್ಲಿ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ವಿರೋಧಿಸಲು ಸಾಧ್ಯವಾಗಲಿಲ್ಲ, ಜೊತೆಗೆ ಇಬ್ಬರು ನರ್ಸ್‌ಗಳು ಸಹ ತನ್ನ ಸುತ್ತ ಇದ್ದರು ಆದರೆ ಅವರು ನನಗೆ ಯಾವುದೇ ಸಹಾಯ ಮಾಡಲಿಲ್ಲ ಎಂದು ದೂರಿನಲ್ಲಿ ಹೇಳಿದ್ದಾಳೆ.

ಸಂತ್ರಸ್ತೆಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್​​ ಮುಂದೆ ದಾಖಲಿಸಲಾಗಿದೆ. ಪೊಲೀಸ್​​ ತಂಡವು ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯಗಳ ತುಣುಕನ್ನು ಪರಿಶೀಲಿಸುತ್ತಿದೆ. ಶೀಘ್ರದಲ್ಲೇ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net