ಅಹಮದಾಬಾದ್​ ವಿಮಾನ ದುರಂತ: ಹಾಸ್ಟೆಲ್​ ಕಟ್ಟಡಕ್ಕೆ ಡಿಕ್ಕಿ! ಮೆಡಿಕಲ್​ ವಿದ್ಯಾರ್ಥಿಗಳು ಮೃತಪಟ್ಟ ಶಂಕೆ | Ahmedabad Plane Crash

ವಿಜಯವಾಣಿ (74)
Published on

Plane Crash: ಇಂದು (ಜೂನ್​ 12) ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್​ ಆದ ಕೆಲವೇ ಸಮಯದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ಭಸ್ಮವಾಗಿದೆ. ಏರ್ ಇಂಡಿಯಾ 171 ವಿಮಾನವಾಗಿ ಕಾರ್ಯನಿರ್ವಹಿಸುತ್ತಿರುವ ಬೋಯಿಂಗ್ 787-8 ಡ್ರೀಮ್‌ಲೈನರ್ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರನ್ನು ಹೊತ್ತೊಯ್ಯುತ್ತಿತ್ತು. ಬೆಂಕಿಗೆ ಆಹುತಿಯಾದ ವಿಮಾನದಲ್ಲಿ ಎಷ್ಟು ಮಂದಿ ಮೃತರು ಎಂಬ ವರದಿ ಇನ್ನೂ ಲಭ್ಯವಾಗಿಲ್ಲ ಎಂಬುದೇ ಅಚ್ಚರಿ.

ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಉಳಿದಿದ್ದ ಹಾಸ್ಡೆಲ್​ ಕಟ್ಟಡಕ್ಕೆ ವಿಮಾನ ಡಿಕ್ಕಿ ಹೊಡೆದಿದ್ದು, 20ಕ್ಕೂ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ವರದಿಗಳು ಕೂಡ ಪ್ರಕಟವಾಗಿವೆ. ಎಷ್ಟು ಮಂದಿ ವಿಮಾನ ದುರಂತದಲ್ಲಿ ಬಲಿಯಾಗಿದ್ದಾರೆ ಎಂಬ ವರದಿ ಮಾತ್ರ ಇನ್ನೂ ಅಧಿಕೃತವಾಗಿ ಹೊರಬಿದ್ದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ....

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net