ವಿಜಯವಾಡದಲ್ಲಿ ಏರ್​ ಇಂಡಿಯಾ ವಿಮಾನ ಅಪಘಾತ

flight
Published on

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನ ಅಪಘಾತಕ್ಕೆ ಈಡಾಗಿದೆ.

ವಿಮಾನ ಲ್ಯಾಂಡಿಂಗ್ ಆಗುವಾಗ ರನ್ ವೇ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ವಿಮಾನದ ರೆಕ್ಕೆ ಬಡಿದು ಅಪಘಾತ ಸಂಭವಿಸಿದೆ. ವಿಮಾನದಲ್ಲಿದ್ದ 64 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ಧಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡಿಂಗ್ ವೇಳೆ ವಿಮಾನದಲ್ಲಿ ಕಾನಿಸಿಕೊಂಡ ತಾಂತ್ರಿಕ ತೊಂದರೆಯೇ ಘಟನೆಗೆ ಕಾರಣ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಜಿ ಮಧುಸೂದನ್ ರಾವ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net