ವಿಮಾನ ಅಪಘಾತ; 166 ಜನರಿಗೆ ರೂ.25 ಲಕ್ಷ ಮಧ್ಯಂತರ ಪರಿಹಾರ ನೀಡಿದ ಏರ್ ಇಂಡಿಯಾ| Air india

flight
Published on

Air india; ಅಹಮದಾಬಾದ್‌ನಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಸುಮಾರು ಒಂದೂವರೆ ತಿಂಗಳ ಬಳಿಕ, ಏರ್ ಇಂಡಿಯಾ ಇಂದು(ಜು.26) AI-717 ವಿಮಾನ ಅಪಘಾತದಿಂದ ಹಾನಿಗೊಳಗಾದ 166 ಜನರ ಕುಟುಂಬಗಳಿಗೆ ತಲಾ ರೂ.25 ಲಕ್ಷ ಮಧ್ಯಂತರ ಪರಿಹಾರವನ್ನು ನೀಡಿರುವುದಾಗಿ ತಿಳಿಸಿದೆ.

ಈ ಬಗ್ಗೆ ವೆಬ್‌ಸೈಟ್‌ನಲ್ಲಿ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ ಏರ್ ಇಂಡಿಯಾ, ಇದುವರೆಗೆ 229 ಮೃತ ಪ್ರಯಾಣಿಕರಲ್ಲಿ 147 ಜನರ ಕುಟುಂಬಗಳಿಗೆ ಮತ್ತು ಅಪಘಾತ ಸ್ಥಳದಲ್ಲಿ ಪ್ರಾಣ ಕಳೆದುಕೊಂಡ 19 ಜನರ ಕುಟುಂಬಗಳಿಗೆ ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ. ಇತರ 52 ಜನರ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಾಗಿದೆ, ಅವರ ಕುಟುಂಬಗಳಿಗೆ ಮಧ್ಯಂತರ ಪರಿಹಾರವನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸಂತ್ರಸ್ತರ ಕುಟುಂಬಗಳೊಂದಿಗೆ ತಾನು ಒಗ್ಗಟ್ಟಿನಿಂದ ನಿಲ್ಲುವುದಾಗಿ ಹೇಳಿರುವ ವಿಮಾನಯಾನ ಸಂಸ್ಥೆ, ಈ ಕಷ್ಟದ ಸಮಯದಲ್ಲಿ ಅವರಿಗೆ ಬೆಂಬಲ ನೀಡಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಹೇಳಿದೆ.

(ಏಜೆನ್ಸಿಸ್)

ಜೂ.12ರ ಮಧ್ಯಾಹ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ಬೋಯಿಂಗ್ 787 ಗ್ರೀಮ್‌ಲೈನರ್ (Al-171) ವಿಮಾನವು ಮೇಘನಿನಗರದಲ್ಲಿರುವ ವೈದ್ಯಕೀಯ ಹಾಸ್ಟೆಲ್ ಮತ್ತು ಅದರ ಕ್ಯಾಂಟೀನ್ ಸಂಕೀರ್ಣಕ್ಕೆ ಅಪ್ಪಳಿಸಿತು. ಈ ಅಪಘಾತದಲ್ಲಿ ಒಟ್ಟು 270 ಜನರು ಸಾವನ್ನಪ್ಪಿದರು.

ಟಾಟಾ ಗ್ರೂಪ್ 'ದಿ ಎಐ-171 ಮೆಮೋರಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್' ಅನ್ನು ನೋಂದಾಯಿಸಿದ್ದು, ಇದನ್ನು ಈ ದುರದೃಷ್ಟಕರ ಅಪಘಾತದ ಬಲಿಪಶುಗಳಿಗೆ ಅರ್ಪಿಸಲಾಗಿದೆ. ಅಪಘಾತದಲ್ಲಿ ಹಾನಿಗೊಳಗಾದ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೂಲಸೌಕರ್ಯವನ್ನು ಪುನರ್ನಿರ್ಮಿಸಲು ಸಹ ಇದು ಬೆಂಬಲ ನೀಡಲಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net