ಕಾರ್ಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ

Fed-Ex
Published on

ದೆಹಲಿ: ಟೇಕ್​ ಆಫ್​ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನವು ತುರ್ತು ಭೂ ಸ್ಪರ್ಶ ಮಾಡಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಆಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಫೆಡ್​-ಎಕ್ಸ್​ ಸಂಸ್ಥೆಗೆ ಸೇರಿದ್ದ ಕಾರ್ಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್​ ಆಗಿದ್ದು ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

ಈ ರೀತಿಯ ಘಟನೆಗಳು ನಡೆಯುತ್ತಿರುತ್ತವೆ. ಆದರೆ, ಕೆಲವೊಮ್ಮೆ ತಾಂತ್ರಿಕ ಸವಾಲುಗಳನ್ನು ಒಡ್ಡುತ್ತವೆ ಟೇಕಾಫ್​ಗೂ ಮುನ್ನ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್​ನಲ್ಲಿ ಬೆಂಗಳೂರು ಮೂಲದ ಆಕಾಶ ಸಂಸ್ಥೆಯ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net